×

TATVAMASI 's video: Gokarna Temple II

@Gokarna Temple II ಗೋಕರ್ಣ
ಮಹಾಗಣಪತಿ ದೇವಾಲಯ, ಶಿವ (ಮಹಾಬಲೇಶ್ವರ) ದೇವಾಲಯಗಳು ಇದ್ದು ಗೋಕರ್ಣ ಒಂದು ಪವಿತ್ರ ಕ್ಷೇತ್ರವಾಗಿದೆ.ದೇವಾಲಯಗಳ ಸಮೀಪದಲ್ಲಿಯೇ ಸುಂದರ ಕಡಲ ತೀರವಿದ್ದು ನೋಡಲು ತುಂಬಾ ಆಕಷ೯ಣೀಯವಾಗಿದೆ.ಇದೊಂದು ಪ್ರವಾಸಿಗರ ತಾಣವಾಗಿದ್ದು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಾರೆ. ಗೋಕರ್ಣದಲ್ಲಿ ೩ ಸಮುದ್ರ ತೀರಗಳಿದ್ದು ನೋಡಲು ತುಂಬಾ ರಮಣೀಯವಾಗಿದೆ ಶ್ರೀ ಕೈಲಾಸಾಧಿಪತಿಯಾದ ಶಂಕರನ ಪರಮ ಭಕ್ತನಾದ ರಾವಣನ ತಾಯಿ ಕೈಕಸೆ ಎಂಬುವಳು. ಈಕೆ ಒಂದು ದಿನ ಪಾರ್ಥಿವ ಲಿಂಗಪೂಜೆಯನ್ನು ಮಾಡಲು ನಿಶ್ಚೈಸಿ ಸಮುದ್ರದಲ್ಲಿ ಸ್ನಾನ ಮಾಡಿ ಮಳಲು ಲಿಂಗವನ್ನು ಮಾಡಿಕೊಂಡು ಪೂಜಿಸುತ್ತಿದ್ದಳು. ಆಗ ಸಮುದ್ರದ ತೆರೆಗಳು ಲಿಂಗ ವನ್ನು ಕೊಚ್ಚಿಕೊಂಡು ಹೋದವು. ಕೈಕಸೆಯು ದುಃಖಿಸುತ್ತಾ ಮಗನಾದ ರಾವಣನನ್ನು ನೆನೆದಳು. ಅವನು ಇದನ್ನು ನೋಡಿ ಎಲ್ಲವನ್ನೂ ಸಹಿಸಿ, ತಾಯೆ, ದುಃಖಿಸಬೇಡ. ಶಿವನನ್ನು ತಪಸ್ಸಿನಿಂದ ಒಲಿಸಿ ಅವನು ಪೂಜಿಸುವ ಪ್ರಾಣ ಲಿಂಗವನ್ನೇ ತಂದುಕೊಡುತ್ತೇನೆಂದು ಸಮಾಧಾನ ಪಡಿಸಿ ಕೈಲಾಸಕ್ಕೆ ಹೋದನು. ಅಲ್ಲಿ ಆತನಿಗೆ ತನ್ನ ಶಕ್ತಿಯಿಂದ ಕೈಲಾಸವನ್ನೇ ಲಂಕೆಗೆ ಒಯ್ದರೆ ಹೇಗೆ ಎಂಬ ಬುಧ್ಧಿ ಹುಟ್ಟಿತು. ಆತ ತನ್ನ ಇಪ್ಪತ್ತು ತೋಳುಗಳ ಬಲದಿಂದ ಕೈಲಾಸವನ್ನು ಎತ್ತಲು ಕೈಲಾಸವು ಅಲುಗಾಡಿತು. ಪಾರ್ವತಿಯು ಭೀತಿಯಿಂದ ಶಿವನನ್ನು ಅಪ್ಪಿದಳು. ಶಿವನು ಪಾರ್ವತಿಯನ್ನು ಸಮಾಧಾನಪಡಿಸಿ ತನ್ನ ಎಡಗಾಲಿನ ಅಂಗುಷ್ಠದಿಂದ ಭೂಮಿಗೆ ಒತ್ತಿದನು. ರಾವಣನ ಕೈಗಳು ಪರ್ವತದ ಬುಡದಲ್ಲಿ ಸಿಕ್ಕಿದವು. ಅವನು ಬಾಧೆಯಿಂದ ನರಳುತ್ತ ಹರನನ್ನು ಪ್ರಾರ್ಥಿಸಲು ಶಿವನು ಕಾಲನ್ನು ಎತ್ತಿದನು. ರಾವಣನು ಬಲಾತ್ಕಾರದಿಂದ ತನ್ನ ಕೆಲಸವಾಗುವುದೆಂದು ತಿಳಿದು ನೋವಿಗೆ ಹೆದರದೇ ತಪಸ್ಸನ್ನು ಮಾಡಿದನು. ಅದಕ್ಕೂ ಶಿವ ಪ್ರಸನ್ನನಾಗದಿದ್ದಾಗ ತನ್ನ ತಲೆಯನ್ನೇ ಕಡಿದು ಬುರುಡೆಯನ್ನು ತಯಾರಿಸಿ ದೇಹದ ನಾಳಗಳಿಂದ ತಂತಿಯನ್ನು ಮಾಡಿ ಸಾಮಗಾನವನ್ನು ಹಾಡಿದನು. ರಾವಣನ ಸಾಮಗಾನಕ್ಕೆ ರುದ್ರ ಪ್ರಸನ್ನನಾಗಿ ಮೈದಡವಿ ಬೇಕಾದ ವರವನ್ನು ಬೇಡೆಂದನು. ರಾವಣನು ನಮಸ್ಕರಿಸಿ ಶಿವನೇ, ನಿನ್ನ ಅನುಗ್ರಹದಿಂದ ಸಕಲ ಭಾಗ್ಯಗಳೂ ದೇವತೆಗಳೂ ನನ್ನ ದಾಸರಾಗಿರುವರು. ನನ್ನ ತಾಯಿಯು ನಿತ್ಯವೂ ಪೂಜಿಸಲು ನಿನ್ನಿಂದ ಪೂಜಿಸಲ್ಪಡುವ ಪ್ರಾಣಲಿಂಗವನ್ನು ಅನುಗ್ರಹಿಸು ಎಂದನು. ಭವನು ಆತ್ಮಲಿಂಗವನ್ನು ರಾವಣನಿಗೆ ಕೊಡುತ್ತ ಇದನ್ನು ಪೂಜಿಸುವವರ ಸಕಲ ಇಷ್ಟಾರ್ಥಗಳೂ ಕೈಗೂಡುವವು. ಅವರು ಈಶ್ವರನನ್ನೇ ಪಡೆಯುವರು. ಇದನ್ನು ಭೂಮಿಯಲ್ಲಿ ಎಲ್ಲಿಯೂ ಇಡದೇ ತೆಗೆದುಕೊಂಡು ಹೋಗಬೇಕು. ಭೂಮಿಯಲ್ಲಿ ಇಟ್ಟಿದ್ದಾದರೆ ಅದು ಅಲ್ಲೇ ಘಟ್ಟಿಯಾಗಿ ನಿಲ್ಲುತ್ತದೆ ಮತ್ತು ಅದು ಪುನಃ ಎತ್ತಲು ಸಾಧ್ಯವಿಲ್ಲ ಎಂದು ತಿಳಿಸಿ ಶಿವನು ಅಂತರ್ಧಾನನಾದನು. ರಾವಣನು ಹರ್ಷಿತನಾಗಿ ಹರನಿಗೆ ನಮಸ್ಕರಿಸಿ ಲಂಕೆಗೆ ಹೊರಟನು. ಇದನ್ನೆಲ್ಲವನ್ನೂ ಲೋಕ ಸಂಚಾರಿಯಾದ ನಾರದನು ತಿಳಿದು ದೇವಲೋಕದಲ್ಲಿ ಸುಖಾಸೀನರಾಗಿರುವ ದೇವತೆಗಳನ್ನು ಕಂಡು "ಹೇ ದೇವತೆಗಳಿರಾ ರಾವಣನು ಕೈಲಾಸನಾಥನನ್ನು ತಪಸ್ಸಿನಿಂದ ಒಲಿಸಿಕೊಂಡು ಅವನ ಆತ್ಮಲಿಂಗವನ್ನು ಪಡೆದು ಲಂಕೆಗೆ ಹೋಗುತ್ತಿದ್ದಾನೆ. ಅವನು ಲಂಕೆಯನ್ನು ಸೇರಿದರೆ ಅದೇ ಕೈಲಾಸವಾಗುವುದು. ಅವನನ್ನು ದೇವ, ದಾನವ, ರಾಕ್ಷಸ, ಯಕ್ಷ, ಕಿನ್ನರ ಮನುಷ್ಯರಿಂದ ಜಯಿಸಲು ಸಾಧ್ಯವಿಲ್ಲ. ನೀವು ಕಾಲ ಕಳೆಯದೇ ಮಾರ್ಗ ಮಧ್ಯದಲ್ಲಿ ಅವನನ್ನು ತಡೆದು ಅವನ ಕೈಯಿಂದ ಪ್ರಾಣ ಲಿಂಗವನ್ನು ತಪ್ಪಿಸಿ ಭೂಮಿಯಲ್ಲಿ ಇಡುವಂತೆ ಮಾಡಿದರೆ ಪುನಃ ಆ ದುಷ್ಟನಿಗೆ ಅದು ಸಿಗುವುದಿಲ್ಲವೆಂದು ಶಿವನೇ ಹೇಳಿದ್ದಾನೆ. ಬೇಗನೇ ಕಾರ್ಯ ತತ್ಪರರಾಗಿ ಎಂದು ಹೇಳಿ ನಾರದನು ಹೊರಟು ಹೋದನು. ದೇವತೆಗಳು ಗಾಬರಿಯಿಂದ ಏನೊಂದೂ ತಿಳಿಯದೇ ತಮ್ಮನ್ನು ಯಾವಾಗಲೂ ಕಷ್ಟದಲ್ಲಿ ರಕ್ಷಿಸುವ ಮಹಾವಿಷ್ಣುವಿನ ಸ್ತೋತ್ರ ಮಾಡಿ ಅವನಿಗೆ ಎಲ್ಲವನ್ನೂ ಅರಿಕೆ ಮಾಡಿದರು. ವಿಷ್ಣುವು ಹೊಸ ಸಂಕಟವು ಪ್ರಾಪ್ತವಾಯಿತಲ್ಲಾ ಎಂದು ಚಿಂತಿಸಿ ಅದಕ್ಕೊಂದು ಪರಿಹಾರವನ್ನು ಯೋಚಿಸಿ ಗಣಪತಿ ಯನ್ನು ಕರೆದು ರಾವಣನು ನಿನ್ನನ್ನು ಪೂಜಿಸದೇ ನಿನ್ನ ತಂದೆಯನ್ನು ತಪಸ್ಸಿನಿಂದ ಒಲಿಸಿಕೊಂಡು ಮನೆಗೆ ಹೋಗುತ್ತಿದ್ದಾನೆ. ಅವನಿಗೆ ನೀನು ವಿಘ್ನವನ್ನುಂಟು ಮಾಡು. ನಿನಗೆ ಮೋದಕ ಕಡಬು ಕರ್ಜೀಕಾಯಿ ಪಂಚಖಾದ್ಯ ಕಬ್ಬು ಮೊದಲಾದವುಗಳನ್ನು ಕೊಡುತ್ತೇನೆ. ನೀನು ರಾವಣನಿಂದ ಆತ್ಮಲಿಂಗವನ್ನು ಪಡೆದು ಭೂಮಿಯಲ್ಲಿ ಇರಿಸಬೇಕೆಂದು ತಿಳಿಸಿದನು. ದೇವತೆಗಳೂ ಭಕ್ತಿಯಿಂದ ಗಣಪತಿಯನ್ನು ಪೂಜಿಸಿ ಸ್ತೋತ್ರ ಮಾಡಿ ನಮ್ಮನ್ನು ಉದ್ಧರಿಸಬೇಕೆಂದು ಬೇಡಿಕೊಂಡರು. ಗಣಪತಿಯು ಪಶ್ಚಿಮ ಸಮುದ್ರ ತೀರದಲ್ಲಿರುವ ಗೋಕರ್ಣದ ಸಮೀಪದಲ್ಲಿ ರಾವಣನು ಬರುತ್ತಿರುವುದನ್ನು ಕಂಡು ಬ್ರಹ್ಮಚಾರಿಯ ರೂಪವನ್ನು ಧರಿಸಿ ಕಬ್ಬುಗಳನ್ನು ತಿನ್ನುತ್ತಿದ್ದನು. ಆ ಕಾಲಕ್ಕೆ ಸರಿಯಾಗಿ ವಿಷ್ಣುವು ತನ್ನ ಸುದರ್ಶನ ಚಕ್ರದಿಂದ ಸೂರ್ಯನನ್ನು ಮರೆಮಾಡಿ ಸಂಧ್ಯಾಕಾಲವೆಂಬ ಭ್ರ ಮೆಯನ್ನು ರಾವಣನಿಗೆ ಉಂಟು ಮಾಡಿದನು. ರಾವಣನು ಬ್ರಾಹ್ಮಣನೂ, ಜ್ನಾನಿಯೂ ಕರ್ಮನಿಷ್ಠನೂ ಆದ್ದರಿಂದ, ಸೂರ್ಯನು ಅಸ್ತವಾದದ್ದನ್ನು ನೋಡಿ ಸಂಧ್ಯಾವಂದನೆಯನ್ನು ಮಾಡಬೇಕು. ಆದರೆ ಲಿಂಗವನ್ನು ಭೂಮಿಯ ಮೇಲೆ ಇಡುವಂತಿಲ್ಲ, ಏನು ಮಾಡಲಿ? ಎಂದು ಆಲೋಚಿಸುತ್ತಿ ರುವಾಗ ವಟುವೇಷಧಾರಿಯಾದ ಗಣಪತಿಯನ್ನು ಕಂಡನು. ಮುಗುಳು ನಗೆಯಿಂದ ಅವನನ್ನು ಹತ್ತಿರ ಕರೆದು ಬಾಲಕನೆ, ಈ ಲಿಂಗವನ್ನು ಸ್ವಲ್ಪ ಹಿಡಿದುಕೊಂಡಿರು. ನಾನು ಸಂಧ್ಯಾವಂದನೆಯನ್ನು ಮುಗಿಸಿ ಬರುತ್ತೇನೆ. ಅಲ್ಲಿಯವರೆಗೆ ಭೂಮಿಯ ಮೇಲೆ ಇದನ್ನು ಇಡಬಾರದು; ಜೋಕೆ ಎಂದನು. ಗಣಪತಿಯು ಲಿಂಗವನ್ನು ತೆಗೆದುಕೊಂಡು ಇದು ಭಾರವಾಗಿದೆ; ನನ್ನಿಂದ ಬಹಳ ಹೊತ್ತು ಹಿಡಿದುಕೊಳ್ಳಲು ಸಾಧ್ಯವಿಲ್ಲ. ಮೂರು ಬಾರಿ ನಿನ್ನನ್ನು ಕರೆಯುತ್ತೇನೆ ನೀನು ಬರಬೇಕು. ಬರದಿದ್ದಲ್ಲಿ ಇದನ್ನು ಭೂಮಿಯ ಮೇಲೆ ಇಡುತ್ತೇನೆ, ಎಂದು ಹೇಳಲು ರಾವಣನು ಅದಕ್ಕೆ ಒಪ್ಪಿಕೊಂಡನು. ರಾವಣನು ಶೌಚವನ್ನು ಪೂರೈಸಿ ಕಾಲು ತೊಳೆ ಯುತ್ತಿರುವಾಗ ಒಮ್ಮೆ ರಾವಣಾ ಎಂದು ಕರೆದನು. ಅರ್ಘ್ಯವನ್ನು ಕೊಡುತ್ತಿರುವಾಗ ರಾವಣಾ ಎಂದು ಕರೆದನು. ಜಪವನ್ನು ಪ್ರಾರಂಭಿಸುತ್ತಿರುವಾಗ ಓ ರಾವಣಾ ಎಂದು ಮೂರನೇ ಬಾರಿ ಕೂಗಿದನು. ರಾವಣನು ಓ ಬಂದೆ ಎಂದು ಕೂಗುತ್ತ ಓಡಿ ಬರುವುದರೊಳಗಾಗಿ ಲಿಂಗವನ್ನು ಭೂಮಿಯ ಮೇಲೆ ಶಿವಸ್ಮರಣೆ ಮಾಡುತ್ತ ಇಟ್ಟನು. ರಾವಣನು ಸಿಟ್ಟಿನಿಂದ ಗಣಪತಿಯ ನೆತ್ತಿಯ ಮೇಲೆ ಮುಷ್ಟಿಯಿಂದ ಗುದ್ದಿದನು. ಬಲಿಷ್ಟನಾದ ರಾವಣನ ಗುದ್ದಿನಿಂದ ನೆತ್ತಿಯ ಮೇಲೆ ಒಂದು ಕುಳಿಯಾಗಿ ಹೊಟ್ಟೆಯು ಕುಸಿಯಿತು. ರಾವಣನು ತನ್ನ ಶಕ್ತಿಯ ಗರ್ವದಿಂದ ಲಿಂಗವನ್ನು ಕೀಳಲು ಪ್ರಯತ್ನಿಸಿದನು. ಆದರೂ ಅದನ್ನು ಕೀಳಲು ಅವನಿಂದ ಆಗಲಿಲ್ಲ. ಆಗ ತನ್ನ ತಪಸ್ಸು ನಿಷ್ಫಲವಾದ ಸಿಟ್ಟಿನಿಂದ ಅಲ್ಲಿಯೇ ಬಿದ್ದ ಲಿಂಗದ ಸಂಪುಟವನ್ನು ದಾರವನ್ನೂ ಲಾಲ್ಕು ದಿಕ್ಕಿಗೆ ಬೀಸಿದನು. ಅದು ಸಜ್ಜೇಶ್ವರ, ಗುಣವಂತೇಶ್ವರ, ಧಾರೇಶ್ವರ. ಮೃಡೇಶ್ವರ ಎಂಬ ಹೆಸರಿನಿಂದ ಪ್ರಖ್ಯಾಥವಾಯಿತು. ತನ್ನ ರಾಕ್ಷಸ ಶಕ್ತಿಯು ಸೋತು ಹೋಗಲು ನೀನೇ ಮಹಾಬಲನೆಂದು ಕೂಗಿದನು. ಆ ಕಾಲಕ್ಕೆ ದೇವತೆಗೆಳು ಮಂದಾರದ ಮಳೆಗಳನ್ನು(ಪುಷ್ಪವೃಷ್ಟಿ) ಸುರಿಸಿದರು. ವಿಷ್ಣುವು ಚಕ್ರವನ್ನು ತೆಗೆಯಲು ಸೂರ್ಯನು ಕಾಣಿಸಿಕೊಂಡನು. ಸುರರು ರಾವಣನನ್ನು ನೋಡಿ ಕಿಲಕಿಲನೆ ನಕ್ಕರು. ರಾವಣನು ನಾಚಿಕೆಯಿಂದ ಓಡಿ ಹೋದನು. ಇದನ್ನೆಲ್ಲವನ್ನೂ ಪರಮೇಶ್ವರನು ವಾಯುವಿನಿಂದ ತಿಳಿದು ಗೋಕರ್ಣಕ್ಕೆ ಬಂದನು. ಲಿಂಗವು ರಾವಣನಿಂದ ಬಹಳ ಘಾಸಿಯಾಗಿದ್ದನ್ನು ನೋಡಿ ಪಶ್ಚಾತ್ತಾಪ ಪಟ್ಟನು. ತಾನು ಲಿಂಗವನ್ನು ಪೂಜಿಸಿದನು. @SriGokarna Temple

14

4
TATVAMASI
Subscribers
12.5K
Total Post
211
Total Views
0.9M
Avg. Views
26.2K
View Profile
This video was published on 2022-07-06 09:30:12 GMT by @Crazy-Flicks on Youtube. TATVAMASI has total 12.5K subscribers on Youtube and has a total of 211 video.This video has received 14 Likes which are lower than the average likes that TATVAMASI gets . @Crazy-Flicks receives an average views of 26.2K per video on Youtube.This video has received 4 comments which are lower than the average comments that TATVAMASI gets . Overall the views for this video was lower than the average for the profile.

Other post by @Crazy Flicks